×
Ad

ಲೋಕಾಯುಕ್ತ ದಾಳಿ ವೇಳೆ ನನ್ನ ಮನೆಯಲ್ಲಿ ಸಿಕ್ಕಿದ್ದು ಅಡಿಕೆ ತೋಟ, ಕ್ರಷರ್​​ನಿಂದ ಬಂದ ಹಣ: ಮಾಡಾಳ್ ವಿರೂಪಾಕ್ಷಪ್ಪ

''ಸೂಕ್ತ ದಾಖಲೆಗಳನ್ನು ನೀಡಿ ಮತ್ತೆ ಹಣ ಪಡೆದುಕೊಳ್ಳುತ್ತೇವೆ''

Update: 2023-03-07 17:01 IST

ಬೆಂಗಳೂರು: ಲಂಚ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 6 ದಿನಗಳ ಬಳಿಕ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿರುವ ಅವರ ನಿವಾಸಕ್ಕೆ ವಾಪಸ್‌ ಆಗಿದ್ದಾರೆ.

ವಿರೂಪಾಕ್ಷಪ್ಪ ಅವರು ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಡಾಳ್‌ ವಿರೂಪಾಕ್ಷಪ್ಪ, ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ತನ್ನ ಮನೆಯಲ್ಲಿ ದೊರೆತ ಹಣಕ್ಕೆ ಸಂಬಂಧಿಸಿ ನಮ್ಮ ಬಳಿ ಸೂಕ್ತ ದಾಖಲೆಗಳಿವೆ. ಅದನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಕೊಟ್ಟು ನಮ್ಮ ಹಣವನ್ನು ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದರು. 

ಚನ್ನಗಿರಿ ಅಂದರೆ ಅಡಿಕೆ ನಾಡು, ಈ ತಾಲೂಕಿನ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125ಕ್ಕೂ ಹೆಚ್ಚು  ಅಡಕೆ ತೋಟವಿದೆ. 2 ಕ್ರಷರ್ ಇದ್ದಾವೆ, ಅಡಿಕೆ ತೋಟ, ಕ್ರಷರ್​​ನಿಂದ ಬಂದ ಹಣವನ್ನು ಮನೆಯಲ್ಲಿಟ್ಟಿದ್ದೆವು. ಅದನ್ನೇ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಸಮರ್ಥಿಸಿಕೊಂಡರು. 

''ತನಿಖಾಧಿಕಾರಿ ಮುಂದೆ ಹಾಜರಾಗುತ್ತೇನೆ'':

''ಕೆಎಸ್​ಡಿಎಲ್​ ಅಧ್ಯಕ್ಷನಾಗಿ ನಿಯಮಬಾಹಿರ ಕೆಲಸ ಮಾಡಿಲ್ಲ. ಪಕ್ಷಕ್ಕೆ ಎಂದೂ ದ್ರೋಹ ಮಾಡುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಬ್ಬ ಶಾಸಕ ಅಂತ ನೋಡದೇ ನಿಷ್ಪಕ್ಷಪಾತ ತನಿಖೆ ಮಾಡುವುದಾಗಿ ಹೇಳಿದ್ದಾರೆ. ಆಡಳಿತ ಪಕ್ಷದ ಶಾಸನಕ ಮೇಲೆ ಈ ರೀತಿ ದಾಳಿ ನಡೆದಿದ್ದು ಇತಿಹಾಸದಲ್ಲೇ ಮೊದಲು. 48 ಗಂಟೆಯೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗುತ್ತೇನೆ. ದೋಷ ಮುಕ್ತನಾಗಿ ಬರುತ್ತೇನೆ''

- ಮಾಡಾಳ್ ವಿರೂಪಾಕ್ಷಪ್ಪ- ಶಾಸಕ

Similar News