ದ್ವಿತೀಯ ಪಿಯುಸಿ ಪರೀಕ್ಷೆ: ಉಚಿತ ಬಸ್ ಸಂಚಾರಕ್ಕೆ BMTC ಅವಕಾಶ
ಬೆಂಗಳೂರು, ಮಾ. 7: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾ.9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಎಂಟಿಸಿ ಸಂಸ್ಥೆ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ ಮಾ.9ರಿಂದ ಮಾ.29ರ ವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದುರುಗುವಾಗ ‘ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ’ವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ನಿಗಮದ ಎಲ್ಲ ಚಾಲಕ, ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುವು ಮಾಡಿಕೊಡಬೇಕು. ಇನ್ನೂ ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.