×
Ad

ಪತ್ರಕರ್ತೆ ಸ್ವಾತಿ ಚತುರ್ವೇದಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ತಡೆ

Update: 2023-03-07 22:22 IST

ಹೊಸದಿಲ್ಲಿ, ಮಾ. 7: ಪತ್ರಕರ್ತೆ ಸ್ವಾತಿ ಚತುರ್ವೇದಿ ವಿರುದ್ಧ ದಿಲ್ಲಿಯ ಬಿಜೆಪಿ ನಾಯಕಿ ತೇಜಿಂದರ್ ಬಗ್ಗಾ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯನ್ನು ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸದಂತೆ ದಿಲ್ಲಿ ಉಚ್ಚ ನ್ಯಾಯಾಲಯ ಮಂಗಳವಾರ ತಡೆ ನೀಡಿದೆ.

ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ದಿವ್ಯಾ ಚತುರ್ವೇದಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಎರಡು ವಾರಗಳಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ತೇಜಿಂದರ್ ಬಗ್ಗಾ ಅವರಿಗೆ ನ್ಯಾಯಮೂರ್ತಿ ರಜನೀಶ್ ಭಟ್ನಗರ್ ನೋಟಿಸು ನೀಡಿದ್ದಾರೆ.

ಈ ಪ್ರಕರಣ ಸ್ವಾತಿ ಚತುರ್ವೇದಿ 2017 ಮಾರ್ಚ್‌ನಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿದ್ದು. ಈ ಟ್ವೀಟ್‌ನಲ್ಲಿ ಸ್ವಾತಿ ಚತುರ್ವೇದಿ ಅವರು ತೇಜಿಂದರ್ ಬಗ್ಗಾ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವನ್ನು ಉಲ್ಲೇಖಿಸಿದ್ದರು.

ತನ್ನ  ಮುಂದೆ ಹಾಜರಾಗುವಂತೆ ವಿಚಾರಣಾ ನ್ಯಾಯಾಲಯ 2018ರಲ್ಲಿ ಚತುರ್ವೇದಿಗೆ ಸಮನ್ಸ್ ನೀಡಿತ್ತು. ಆದರೆ, ಅವರು ಈ ಆದೇಶವನ್ನು 2022 ಡಿಸೆಂಬರ್‌ನಲ್ಲಿ ಪ್ರಶ್ನಿಸಿದ್ದರು. ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಅವರು ತನ್ನ ವಿರುದ್ಧದ ಸಮನ್ಸ್ ಅನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. 

Similar News