ಹುಣಸೂರು: ಕರ್ತವ್ಯದ ವೇಳೆ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೇಬಲ್ ಮೃತ್ಯು

Update: 2023-03-07 18:21 GMT

ಹುಣಸೂರು, ಮಾ.7: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಹೃದಯಾಘಾತದಿಂದ  ಮೃತಪಟ್ಟಿರುವ ಘಟನೆ ಹುಣಸೂರಿನಲ್ಲಿ ವರದಿಯಾಗಿದೆ.

ಮೃತರನ್ನು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಅರವಿಂದ. ಎಸ್.(48) ಎಂದು ಗರುತಿಸಲಾಗಿದೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಂಗಳವಾರ ಸಂಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅರವಿಂದ್‌ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಹುಣಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇವರು 1999 ಬ್ಯಾಚ್ ಪೋಲಿಸ್ ಪೇದೆಯಾಗಿದ್ದು, ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದವರು ಎಂದು ತಿಳಿದುಬಂದಿದೆ. ಅವರು ಹುಣಸೂರು ಸೇರಿದಂತೆ ಇತರ ಕಡೆ ಸೇವೆ ಸಲ್ಲಿಸಿದ್ದಾರೆ.

Similar News