ದಿಲ್ಲಿ ಮದ್ಯ ನೀತಿ ಪ್ರಕರಣ: ನಾಳೆ ಕೆಸಿಆರ್ ಪುತ್ರಿ ಕವಿತಾರನ್ನುಮತ್ತೊಮ್ಮೆ ವಿಚಾರಣೆ ನಡೆಸಲಿರುವ ಈಡಿ
ಹೊಸದಿಲ್ಲಿ: ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಈಡಿ) ಮಾರ್ಚ್ 10 ರಂದು ವಿಚಾರಣೆ ನಡೆಸಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 12 ರಂದು ಹೈದರಾಬಾದ್‌ನಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿಯನ್ನು ಸಿಬಿಐ ಅಧಿಕಾರಿಗಳು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ಜಾರಿ ನಿರ್ದೇಶನಾಲಯವು ಮದ್ಯದ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಬಗ್ಗೆ ತನಿಖೆ ನಡೆಸುತ್ತಿದೆ.
ದಿಲ್ಲಿ ನ್ಯಾಯಾಲಯವು ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ಮಾರ್ಚ್ 13 ರವರೆಗೆ ಈಡಿ ಕಸ್ಟಡಿಗೆ ಹಾಗೂ ಮದ್ಯದ ಉದ್ಯಮಿ ಅಮನದೀಪ್ ಧಲ್ ಅವರನ್ನು ಮಾರ್ಚ್ 21 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಒಂದು ದಿನದ ನಂತರ ಕವಿತಾ ಅವರಿಗೆ ಸಮನ್ಸ್ ನೀಡಲಾಗಿದೆ.
ಕವಿತಾ ಅವರು ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಕಿಕ್‌ಬ್ಯಾಕ್‌ನಿಂದ ಲಾಭ ಪಡೆದ "ಸೌತ್ ಕಾರ್ಟೆಲ್" ನ ಭಾಗವಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.