ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಮೌನ ಪ್ರತಿಭಟನೆ: ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ಶರ್ಮಿಳಾ ಪೊಲೀಸ್ ವಶಕ್ಕೆ

Update: 2023-03-08 11:10 GMT

ಹೊಸದಿಲ್ಲಿ: ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಜನ ಶ್ರಮಿಕ ರೈತ ತೆಲಂಗಾಣ ಪಕ್ಷದ (ವೈಆರ್‌ಎಸ್‌ಟಿಪಿ) ಮುಖ್ಯಸ್ಥೆ ವೈ.ಎಸ್. ಶರ್ಮಿಳಾ ಅವರನ್ನು ಹೈದರಾಬಾದ್‌ನ ಟ್ಯಾಂಕ್ ಬಂಡ್‌ನಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ.

ಆರಂಭದಲ್ಲಿ ಶರ್ಮಿಳಾರನ್ನು ಬೊಲ್ಲಾರಂ ಪೊಲೀಸ್ ಠಾಣೆಗೆ ಕರೆದೊಯ್ದರು.  ಆದರೆ ನಂತರ ಲೋಟಸ್ ಪಾಂಡ್ ಪ್ರದೇಶದಲ್ಲಿನ ಆಕೆಯ ನಿವಾಸಕ್ಕೆ ಸ್ಥಳಾಂತರಿಸಲಾಯಿತು.

ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ (ಕೆಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಡಾ.ಪೀತಿ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳನ್ನು ರಕ್ಷಿಸಲು ರಾಜ್ಯ ಸರಕಾರ ಪ್ರಯತ್ನಿಸುತ್ತಿದೆ ಎಂದು ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರು ಆರೋಪಿಸಿದ ಒಂದು ದಿನದ ನಂತರ ಶರ್ಮಿಳಾ ಪ್ರತಿಭಟನೆ ನಡೆಸಿದ್ದಾರೆ.

ರಾಣಿ ರುದ್ರಮ ದೇವಿ ಪ್ರತಿಮೆ ಬಳಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಪ್ರತಿಭಟನೆ ನಡೆಸಿದ ಶರ್ಮಿಳಾ, ಮಹಿಳೆಯರಿಗೆ ಭದ್ರತೆಯ ಕೊರತೆಯನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿನ ಬಿಆರ್‌ಎಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Similar News