×
Ad

ಕಾರ್ಕಳ ರೋಟರಿ ಆಸ್ಪತ್ರೆಯ ನೂತನ ಸಂಕೀರ್ಣ ಉದ್ಘಾಟನೆ

Update: 2023-03-08 18:22 IST

ಕಾರ್ಕಳ, ಮಾ.8: ಕಾರ್ಕಳದ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ  ನಿರ್ಮಿಸಿದ ಹೊಸ ರೋ.ಕೆ.ಕೃಷ್ಣ ಪ್ರಭು ಓಪಿಡಿ ಬ್ಲಾಕ್ ಮತ್ತು ಹೊಸ ಶಸ್ತ್ರಚಿಕಿತ್ಸಾ ಸಂಕೀರ್ಣದ ಉದ್ಘಾಟನೆಯನ್ನು ಇಂಧನ ಹಾಗೂ ಕನ್ನಡ  ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ನೆರವೇರಿಸಿದರು.

ಮಣಿಪಾಲ ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್(ಡಾ)ಎಂ.ಡಿ. ವೆಂಕಟೇಶ್ ಮಾತನಾಡಿದರು. ಅಧ್ಯಕ್ಷತೆಯನ್ನು ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ವಹಿಸಿದ್ದರು.  

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ  ಡೀನ್  ಡಾ .ಪದ್ಮರಾಜ್ ಹೆಗ್ಡೆ, ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್, ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಆರೋಗ್ಯ ವಿಜ್ಞಾನದ ಸಹ ಉಪಕುಲಪತಿ ಡಾ.ಶರತ್ ಕುಮಾರ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ಅವರು ಸ್ವಾಗತಿಸಿದರು. ಡಾ.ಸಂಜಯ್ ಕುಮಾರ್    ವಂದಿಸಿದರು.  

Similar News