ಹಿಜಾಬ್ ವಿವಾದ | ಅಮಾನತು ಆಗಿದ್ದ ವಿದ್ಯಾರ್ಥಿಗಳು ಈಗಲಾದರೂ ಪರೀಕ್ಷೆ ಬರೆಯಲಿ: ಸಚಿವ ಬಿ.ಸಿ.ನಾಗೇಶ್

Update: 2023-03-08 17:42 GMT

ಬೆಂಗಳೂರು, ಮಾ.8: ಹಿಜಾಬ್ ವಿವಾದ ಸಂಬಂಧ ಕಳೆದ ಬಾರಿ ಅಮಾನತು ಆಗಿದ್ದ ವಿದ್ಯಾರ್ಥಿಗಳು ಈ ಬಾರಿಯಾದರೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಸಲಹೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡದ ಉಪ್ಪಿನಂಗಡಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡೇ ತರಗತಿಗೆ ಬರುತ್ತಿದ್ದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಈ ಪೈಕಿ ಮೂವರು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಉಳಿದ ಮೂರು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿ ಎಂದು ಸಲಹೆ ನೀಡುತ್ತೇನೆ ಎಂದರು.

ಇನ್ನೂ, ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಾಲನೆ ಕಡ್ಡಾಯವಾಗಿದೆ. ಕಳೆದ ವರ್ಷದ ನಿಯಮವೇ ಈ ವರ್ಷವೂ ಜಾರಿಯಲ್ಲಿರುತ್ತದೆ. ಅಲ್ಲದೆ, ಕಳೆದ ಬಾರಿ ಆರು ವಿದ್ಯಾರ್ಥಿಗಳು ಈ ನಿಯಮದಡಿ ಪರೀಕ್ಷೆ ಬರೆದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: "ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದ್ದಾನೆ ತಾನೇ": ಮಹಿಳೆ ಎದುರು ಕೂಗಾಡಿದ ಸಂಸದ ಮುನಿಸ್ವಾಮಿ 

Similar News