ಕುತೂಹಲ ಮೂಡಿಸಿದ ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ - ರೇವಣ್ಣ ಭೇಟಿ
Update: 2023-03-09 10:53 IST
ಹಾಸನ: ಹಾಸನ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಎಚ್. ಪಿ ಸ್ವರೂಪ್ ಅವರು ಬುಧವಾರ ಮಾಜಿ ಸಚಿವ, ಜೆಡಿಎಸ್ ನಾಯಕ ರೇವಣ್ಣ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಉಭಯ ನಾಯಕರ ನಡುವೆ ಟಿಕೆಟ್ ವಿಷಯವಾಗಿ ಜಟಾಪಟಿ ನಡೆದಿತ್ತು. ಆದರೆ ಈ ನಡುವೆ ಹಾಸನದ ಲೋಕಸಭಾ ಸದಸ್ಯರ ಅಧಿಕೃತ ಕ್ವಾರ್ಟರ್ಸ್ ನಲ್ಲಿ ಸ್ವರೂಪ್ ರೇವಣ್ಣ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಮೂಡಿಸಿದೆ.
ಇನ್ನು ರೇವಣ್ಣ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವರೂಪ್, ''ಪಂಚರತ್ನ ಯಾತ್ರೆ ಬಗ್ಗೆ ಕುಳಿತು ಮಾತನಾಡೋಣ ಅಂತ ಹೇಳಿದ್ದಾರೆ ಅಷ್ಟೇ. ಟಿಕೆಟ್ ವಿಚಾರ ಮಾತನಾಡಿಲ್ಲ. ಮಾತನಾಡೋಣ ಎಂದು ಹೇಳಿದ್ದಾರೆ. ದೊಡ್ಡವರೆಲ್ಲ ಕುಳಿತುಕೊಂಡು ತೀರ್ಮಾನ ಮಾಡೋಣ ಎಂದಿದ್ದಾರೆ'' ಎಂದು ಸ್ಪಷ್ಟಪಡಿಸಿದ್ದಾರೆ.