ದಿಲ್ಲಿಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಹಲವರಿಗೆ ಢಿಕ್ಕಿ: ಇಬ್ಬರು ಮೃತ್ಯು, 8 ಜನರಿಗೆ ಗಾಯ
ಹೊಸದಿಲ್ಲಿ: ಹೊಸದಿಲ್ಲಿಯ ಮಾಲಾಯ್ ಮಂದಿರ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಹಲವು ಜನರಿಗೆ ಢಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಮಕ್ಕಳು ಸೇರಿದಂತೆ 8 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಗಾಯಗೊಂಡ ಇಬ್ಬರನ್ನು ಮುನ್ನಾ ಹಾಗೂ ಸಮೀರ್ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ತೀವ್ರ ಗಾಯದಿಂದಾಗಿ ಮೃತಪಟ್ಟಿದ್ದಾರೆ.
ಪ್ರಾಥಮಿಕ ತನಿಖೆಯ ಸಮಯದಲ್ಲಿ ಕಾರ್‌ನ ಚಾಲಕನು ಅತಿಯಾದ ವೇಗದದಲ್ಲಿ ವಾಹನ ಚಲಾಯಿಸುತ್ತಿದ್ದ ಹಾಗೂ ನಿಯಂತ್ರಣವನ್ನು ಕಳೆದುಕೊಂಡು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಇತರ 2 ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಗಾಯಗೊಂಡ ಜನರು ಏಮ್ಸ್ ನಲ್ಲಿ ಟ್ರೌಮಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಗಾಯಗೊಂಡವರು ಶಿವ ಕ್ಯಾಂಪ್, ವಸಾಂತ್ ವಿಹಾರ್ ಹಾಗೂ ಏಕ್ತಾ ವಿಹಾರ್, ಆರ್.ಕೆ. ಪುರಂನ ನಿವಾಸಿಗಳು.