×
Ad

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2023-03-09 14:13 IST

ಕಲ್ಲಡ್ಕ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಬಾಳ್ತಿಲ ಗ್ರಾಮ ಪಂಚಾಯತ್‌ ಬಳಿಯ ನಿವಾಸಿ ಚಂದ್ರಶೇಖರ್‌ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಕಾಲೇಜಿಗೆಂದು ಹೊರಟು ಹೋಗಿ ಏನೋ ಮರೆತು ಹೋಗಿದ್ದೇನೆಂದು ವಾಪಾಸ್‌ ಮನೆಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ.

ಮೃತ ವಿದ್ಯಾರ್ಥಿನಿಯು ಭಗವದ್ಗೀತೆಯ 700 ಶ್ಲೋಕವನ್ನು ಕಂಠಪಾಠ ಮಾಡಿ ಜಿಲ್ಲಾ ಪ್ರಶಸ್ತಿಯನ್ನು ಪಡೆದಿದ್ದಳು.

Similar News