ಜೆಡಿಎಸ್ ಸರಕಾರ ಬಂದರೆ ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ ತಲಾ 2 ಲಕ್ಷ ಪ್ರೋತ್ಸಾಹ ಧನ: ಎಚ್ ಡಿಕೆ ಘೋಷಣೆ

Update: 2023-03-09 10:49 GMT

ತುಮಕೂರು: ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಬುಧವಾರ ತುಮಕೂರು ಜಿಲ್ಲೆಯ ಹಾಲ್ಕುರಿಕೆ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ''ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ನಾವು ಅಧಿಕಾರಕ್ಕೆ ಬಂದರೆ, ಹಳ್ಳಿ ಯುವಕರನ್ನು, ಹಳ್ಳಿ ರೈತರನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ ನೀಡುತ್ತೇವೆ'' ಎಂದು ಘೋಷಿಸಿದ್ದಾರೆ.

''ಅಲ್ಲದೇ, ಈಗಾಗಲೇ ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಪ್ರೋತ್ಸಾಹ ಧನ ನೀಡುವುದರಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟು ಹಣ ಖರ್ಚಾಗುತ್ತದೆ ಎಂದು ಲೆಕ್ಕ ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆಗೊಳಿಸುವುದರಿಂದ ಯಾವುದೇ ಸಮಸ್ಯೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಈ ಯೋಜನೆ ಜಾರಿ ನಿಶ್ಚಿತ'' ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದರು.

Similar News