ಬೈಂದೂರು: ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ
ಬೈಂದೂರು, ಮಾ.9: ರಾಜ್ಯ ಸರಕಾರದ ಭ್ರಷ್ಟಾಚಾರ ಖಂಡಿಸಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಬೈಂದೂರು ಸರ್ಕಲ್‌ನಲ್ಲಿ ಪ್ರತಿಭಟನೆಯೊಂದು ನಡೆಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮದನ್ ಕುಮಾರ್ ಮಾತನಾಡಿ, ಬಿಜೆಪಿ ಸರಕಾರ ಅಧಿಕಾರ ಅವಧಿಯಲ್ಲಿ ಹಗರಣವನ್ನು ಹೊರತುಪಡಿಸಿ ಬೇರೆ ಯಾವುದೇ ಸಾಧನೆ ಮಾಡಿಲ್ಲ. ಹಾಲಿ ಬಿಜೆಪಿ ಶಾಸಕರ ಮನೆಯಲ್ಲಿ ಎಂಟು ಕೋಟಿ ನಗದು ದೊರೆತರೂ ಸಹ ರಾಜಕೀಯ ಪ್ರಭಾವ ಬಳಸಿ ಪ್ರಕರಣದ ದಾರಿ ತಪ್ಪಿಸುವ ಇವರ ನೈಜತೆಯನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕಾಗಿದೆ ಎಂದರು.
ಒಟ್ಟಾರೆಯಾಗಿ ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದ ಅವರು ಕಮಿಷನ್ ದಂದೆ ಹಾಗೂ ಭ್ರಷ್ಟಾಚಾರ ಬಿಜೆಪಿಯ ಸಾಧನೆಯಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಕಾರ್ಯದರ್ಶಿ ನಾಗರಾಜ ಗಾಣಿಗ, ಪ್ರಮುಖ ರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಮಣಿಕಂಠ ಎಸ್, ಶೇಖರ ಪೂಜಾರಿ ಹಾಗೂ ಪಕ್ಷದ ಮುಖಂಡರಿದ್ದರು.