ಮಂಗಳೂರು: ಗಾಂಜಾ ಸೇವನೆ ಆರೋಪ; ಇಬ್ಬರ ಸೆರೆ

Update: 2023-03-09 16:02 GMT

ಮಂಗಳೂರು: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಗರ್ (26) ಎಂಬಾತ ಮಾದಕ ಸೇವೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ. ಈತನನ್ನು ಕೇರಳದಲ್ಲಿ ವಶಕ್ಕೆ ಪಡೆದಾಗಲೂ ಗಾಂಜಾದ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಅಡ್ಯಾರ್ ಕಣ್ಣೂರಿನ ಕೊಡೆಕ್ಕಲ್ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದ ಬಿಜೈ ಆನೆಗುಂಡಿಯ ನಿವಾಸಿ ಆಲ್ವಿನ್ ಸಿಕ್ವೇರಾ (37) ಎಂಬಾತನನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದು ಪತ್ತೆಯಾಗಿದೆ.

ಕಂಕನಾಡಿ ನಗರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Similar News