×
Ad

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2023-03-09 23:24 IST

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸಂಗಬೆಟ್ಟು ಗ್ರಾಮದ ಅಳಿಕೆ ನಿವಾಸಿ ಅನಿಲ್ ಪೂಜಾರಿ ಬಂಧಿತ ಆರೋಪಿ. ಈತ ಸುಮಾರು ಒಂದು ವರ್ಷ ತಲೆಮರೆಸಿಕೊಂಡಿದ್ದು, ಈತನನ್ನು ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ  ಪುನೀತ್, ಯೋಗೇಶ್, ವಿಜಯ್ ರವರು ಮಾಹಿತಿ ಸಂಗ್ರಹಿಸಿ ಬೆಳ್ತಂಗಡಿಯ ನಡಾ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.

ಸಧ್ಯ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Similar News