ವಿಧಾನಸಭಾ ಚುನಾವಣೆ | ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ, ಸಿಎಂ ಬೊಮ್ಮಾಯಿ ಅಧ್ಯಕ್ಷತೆ

Update: 2023-03-10 11:06 GMT

ಬೆಂಗಳೂರು, ಮಾ.10: ರಾಜ್ಯದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನಿರ್ದೇಶನದಂತೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಚುನಾವಣಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಚುನಾವಣಾ ಪ್ರಚಾರ ಸಮಿತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಆರ್.ಅಶೋಕ್, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ.

ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪಿ.ಸಿ.ಮೋಹನ್, ಶಾಸಕ ಅರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಚುನಾವಣಾ ನಿರ್ವಹಣಾ ಸಮಿತಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂಚಾಲಕರಾಗಿರುವ ಚುನಾವಣಾ ನಿರ್ವಹಣಾ ಸಮಿತಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಅರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣ, ತೇಜಸ್ವಿನಿ ಅನಂತಕುಮಾರ್.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಅಶ್ವತ್ಥ ನಾರಾಯಣ, ಮಹೇಶ್ ಟೆಂಗಿನಕಾಯಿ, ರಾಜ್ಯ ಕಾರ್ಯದರ್ಶಿ ಎಸ್.ಕೇಶವ್ ಪ್ರಸಾದ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ.

Similar News