ಮಾ.12ರಂದು ಧಾರವಾಡದಲ್ಲಿ ಪ್ರಧಾನಿಯಿಂದ ಐಐಟಿ, ಜಯದೇವ ಆಸ್ಪತ್ರೆ ಉದ್ಘಾಟನೆ: ಸಿಎಂ ಬೊಮ್ಮಾಯಿ

Update: 2023-03-10 10:56 GMT

ಹುಬ್ಬಳ್ಳಿ, ಮಾ.10: ಪ್ರಧಾನಿ ನರೇಂದ್ರ ಮೋದಿ ಮಾ.12 ರಂದು ಧಾರವಾಡಕ್ಕೆ ಆಗಮಿಸುತ್ತಿದ್ದು, ಐ.ಐ.ಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬಾರಿ  ಪ್ರಧಾನಿ ಬಂದಾಗ ರಾಜ್ಯದ ಅತ್ಯಂತ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಅವರು ಅನುದಾನ  ನೀಡಿರುವ ಹಿನ್ನೆಲೆಯಲ್ಲಿ ಹಲವಾರು ಪೂರ್ಣಗೊಂಡಿರುವ  ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಇನ್ನು ಕೆಲವನ್ನು ಪ್ರಾರಂಭ ಮಾಡುತ್ತಿದ್ದಾರೆ ಎಂದರು.

ಮೂಲಭೂತ ಸೌಕರ್ಯಗಳಿಗೆ  ದೊಡ್ಡ ಪ್ರಮಾಣದ ಕೊಡುಗೆ: ಕಳೆದ ವರ್ಷಗಳಲ್ಲಿ ಅತಿ ಹೆಚ್ಚು ಹಣ ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಬಂದರುಗಳಿಗೆ ಹಾಗೂ ವಿವಿಧ ಸಂಸ್ಥೆಗಳಿಗೆ, ವಿಶೇಷವಾಗಿ ರಾಜ್ಯ ಹಾಗೂ ಅಂತರ್ ರಾಜ್ಯಗಳ ಮೂಲಭೂತ ಸೌಕರ್ಯಗಳಿಗೆ ಬಹಳ ದೊಡ್ಡ ಪ್ರಮಾಣದ ಕೊಡುಗೆಯನ್ನು ಪ್ರಧಾನಿ ನೀಡಿದ್ದಾರೆ. ಅವೆಲ್ಲವೂ ಲೋಕಾರ್ಪಣೆಯಾಗುತ್ತಿದೆ. ಕಳೆದ 5 ವರ್ಷಗಳ ಸಹಾಯದ ಫಲಶ್ರುತಿ ಇಂದು ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ನಂಬರ್ ಒನ್ ಐಐಟಿ ಮಾಡುವ ಉದ್ದೇಶ: ಹಂತ ಹಂತವಾಗಿ ಐಐಟಿ ಗೆ ಅನುದಾನ ಒದಗಿಸಲಾಗಿದೆ. ಐಐಟಿ ಪ್ರತಿಷ್ಠಿತ ಸಂಸ್ಥೆಯಾಗಿದ್ದು ದೇಶದಲ್ಲಿಯೆ ನಂಬರ್ ಒನ್ ಐಐಟಿ ಮಾಡುವ ಉದ್ದೇಶವಿದೆ. ಧಾರವಾಡ ಸರಸ್ವತಿಯ ನಗರ. ಇಲ್ಲಿ ಐಐಟಿ ಸ್ಥಾಪನೆಯಾಗಿರುವುದು ಕಿರೀಟ ಪ್ರಾಯವಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಪಿ.ಪಿ.ಪಿ ಮಾದರಿ: ಬೇಲೆಕೇರಿ ಬಂದರು ಅಭಿವೃದ್ಧಿಯನ್ನು ಸಾಗರಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು. ಕೇಂದ್ರ ಸರಕಾರದ ಯೋಜನೆಯಡಿ 12 ಯೋಜನೆಗಳಿಗೆ ಅನುಮೊದನೆ ಪಡೆದು ಅನುμÁ್ಠನ ಮಾಡಲಾಗುವುದು. ರಾಜ್ಯದ 2 ಯೋಜನೆಗಳನ್ನು  ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲು ಎಕ್ಸ್‍ಪ್ರೆಷನ್ ಆಫ್ ಇಂಟರೆಸ್ಟ್ ಕರೆಯಲಾಗಿದೆ ಎಂದು ಅವರು ಹೇಳಿದರು.

Similar News