×
Ad

18ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಚಾಂಪಿಯಶಿಪ್‌ಗೆ ಚಾಲನೆ

Update: 2023-03-10 21:09 IST

ಉಡುಪಿ, ಮಾ.10: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಮತ್ತು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗೆ ಶುಕ್ರವಾರ ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಮಣಿಪಾಲ ಮಾಹೆಯ ಸಹ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ ವೆಂಕಟೇಶ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಹಿಸಿದ್ದರು.

ಈ ಸಂದರ್ಭದಲ್ಲಿ ನಿಟ್ಟೆ ಎಜುಕೇಶನ್ ಟ್ರಸ್ಟ್ ನಿರ್ದೇಶಕ ಯೋಗೀಶ್ ಹೆಗ್ಡೆ, ಎಎಫ್‌ಐ ಓರ್ಗನೈಸಿಂಗ್ ಡೆಲಿಗೇಟ್ ಸತೀಶ್ ಉಚ್ಚಿಲ, ಜ್ಞಾನಸುಧ ಸಂಸ್ಥೆಯ ಸುಧಾಕರ್ ಶೆಟ್ಟಿ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ, ಎನ್‌ಇಬಿ ಸ್ಪೋರ್ಟ್ಸ್ ಸಿ.ಎಂ.ಡಿ ನಾಗರಾಜ್ ಅಡಿಗ, ಬೆಂಗಳೂರು ಹೊಂಬಾಳೆ ಗ್ರೂಪ್‌ನ ನಿರ್ದೇಶಕ ಶೈಲಜಾ ವಿಜಯ್ ಕಿರಂಗದೂರ್, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿ ಯೇಶನ್ ಅಧ್ಯಕ್ಷ ಕೆಂಪರಾಜ್, ಕಾರ್ಯದರ್ಶಿ ರಾಜವೇಲು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಕಾರ್ಯದರ್ಶಿ ದಿನೇಶ್ ಕುಮಾರ್ ಸ್ವಾಗತಿಸಿದರು. ಕೋಶಾಧಿಕಾರಿ ದೀಪಕ್ ರಾಮ್ ಬಾಯಾರಿ ವಂದಿಸಿದರು. ಅನುರಾಜ್ ಕಾರ್ಯಕ್ರಮ ನಿರೂಪಿಸಿದರು.

Similar News