ಕಾಪು | ಬಸ್ ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ಶಾಲಾ ವಿದ್ಯಾರ್ಥಿನಿ ಮೃತ್ಯು
Update: 2023-03-11 09:56 IST
ಕಾಪು, ಮಾ.11: ರಸ್ತೆ ದಾಟಲು ನಿಂತಿದ್ದ ಶಾಲಾ ಬಾಲಕಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಕಾಪು ಮಹಾದೇವಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಷಿತಾ(13) ಮೃತಪಟ್ಟ ವಿದ್ಯಾರ್ಥಿನಿ.
ಶನಿವಾರ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವರ್ಷಿತಾ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ನಿಂತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಅತೀ ವೇಗದಿಂದ ಬಂದು ವರ್ಷಿತಾಳಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬಾಲಕಿಯ ತಲೆಗೆ ತೀವ್ರ ಗಾಯಾಗಳಾಗಿತ್ತು. ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಆಕೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
ಬಸ್ಸನ್ನು ವಶಕ್ಕೆ ಪಡೆದಿರುವ ಕಾಪು ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.