ಆರ್.ಧ್ರುವನಾರಾಯಣ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ''ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ'' ಎಂದು ಬರೆದುಕೊಂಡಿದ್ದಾರೆ.
''ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ'' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
''ಧ್ರುವನಾರಾಯಣ ನಿಧನದಿಂದ ತೀವ್ರ ದುಃಖ ಮತ್ತು ನೋವಾಗಿದೆ. ಅವರು ಕೇವಲ ತಳಮಟ್ಟದ ರಾಜಕೀಯ ವ್ಯಕ್ತಿಯಾಗಿರಲಿಲ್ಲ, ಅತ್ಯುತ್ತಮ ವ್ಯಕ್ತಿಯಾಗಿದ್ದರು. ಅವರ ನಿಧನವು ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ನಷ್ಟವಲ್ಲ. ನನಗೂ ವೈಯಕ್ತಿಕವಾಗಿ ದೊಡ್ಡ ನಷ್ಟವಾಗಿದೆ'' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.
''ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಧ್ರುವ ನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
''ಶೋಷಿತರು, ದಮನಿತರು, ದಲಿತ ಮತ್ತು ಹಿಂದುಳಿದ ವರ್ಗಗಳ ಧ್ವನಿಯಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಚಾಮರಾಜನಗರ ಕ್ಷೇತ್ರವನ್ನು ಎರಡು ಬಾರಿ ಲೋಕಸಭೆಯಲ್ಲಿ ಪ್ರತಿನಿಧಿಸಿದ್ದ ಆರ್. ಧ್ರುವನಾರಾಯಣ್ ಅವರ ನಿಧನದಿಂದ ಕರ್ನಾಟಕ ರಾಜ್ಯದ ಒಬ್ಬ ಅತ್ಯುತ್ತಮ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ನಿಧನದಿಂದ ಆಗಿರುವ ದುಃಖವನ್ನು ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ದಯಪಾಲಿಸಲಿ ದಯಾಘನನಾದ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನಿ ಯಲಿ ಎಂದು ಪ್ರಾರ್ಥಿಸುವೆ''. ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.
''ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡ ಆರ್. ಧ್ರುವನಾರಾಯಣ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತೆಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.
''ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ.ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಧ್ರುವನಾರಾಯಣ ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ಭರಿಸಲಾಗದ ನಷ್ಟ. ಅವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
''ಪಕ್ಷ,ಸಂಘಟನೆ,ತತ್ವ,ಸಿದ್ದಾಂತವನ್ನೇ ತನ್ನ ಬದುಕಾಗಿಸಿಕೊಂಡಿದ್ದ,ಸರಳ ಸಜ್ಜನಿಕೆಯ ರಾಜಕಾರಣಿ ಬಹುಕಾಲದ ನನ್ನ ಒಡನಾಡಿಯಾಗಿದ್ದ ಮಾಜಿ ಸಂಸದರಾದ ಧೃವ ನಾರಾಯಣ ಅವರ ಅಗಲಿಕೆ ಸುದ್ದಿ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಕ್ಷ ಮುತ್ಸದ್ದಿ ರಾಜಕಾರಣಿಯನ್ನ ಕಳೆದುಕೊಂಡು ಬಡವಾಯಿತು. ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು''
- ಬಿ.ಕೆ ಹರಿಪ್ರಸಾದ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರು
ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— Basavaraj S Bommai (@BSBommai) March 11, 2023
ಓಂ ಶಾಂತಿಃ pic.twitter.com/GetGPVmGmM
ಪಕ್ಷ,ಸಂಘಟನೆ,ತತ್ವ,ಸಿದ್ದಾಂತವನ್ನೇ ತನ್ನ ಬದುಕಾಗಿಸಿಕೊಂಡಿದ್ದ,ಸರಳ ಸಜ್ಜನಿಕೆಯ ರಾಜಕಾರಣಿ ಬಹುಕಾಲದ ನನ್ನ ಒಡನಾಡಿಯಾಗಿದ್ದ ಮಾಜಿ ಸಂಸದರಾದ ಧೃವ ನಾರಾಯಣ ಅವರ ಅಗಲಿಕೆ ಸುದ್ದಿ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
— Hariprasad.B.K. (@HariprasadBK2) March 11, 2023
ಪಕ್ಷ ಮುತ್ಸದ್ದಿ ರಾಜಕಾರಣಿಯನ್ನ ಕಳೆದುಕೊಂಡು ಬಡವಾಯಿತು. ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು. pic.twitter.com/94n3LTfz2W
I am shocked by the unfortunate & untimely demise of @INCKarnataka leader, former MP & my dear friend Shri R Dhruvanarayan.
— Siddaramaiah (@siddaramaiah) March 11, 2023
My deepest condolences to his family members and well wishers. pic.twitter.com/rtM4x5Z1oW
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಧ್ರುವ ನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. pic.twitter.com/uX1o4Nyw0u
— DK Shivakumar (@DKShivakumar) March 11, 2023
ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡ ಆರ್. ಧ್ರುವನಾರಾಯಣ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತೆಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/FhLRO9w5Eu
— H D Devegowda (@H_D_Devegowda) March 11, 2023