×
Ad

ಸುಳ್ಯ | ನಾಯಿ ಅಡ್ಡ ಬಂದಿದ್ದರಿಂದ ಅಪಘಾತಕ್ಕೀಡಾದ ಬೈಕ್: ಸವಾರನಿಗೆ ಗಂಭೀರ ಗಾಯ

Update: 2023-03-11 10:41 IST

ಸಳ್ಯ, ಮಾ.11: ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಆಲೆಟ್ಟಿ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ವೇಳೆ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಆಲೆಟ್ಟಿ ನಿವಾಸಿ ಮಹಾಬಲ ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡವರು. ಮಹಾಬಲ ಶೆಟ್ಟಿ ತನ್ನ  ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆಯಲ್ಲಿ ಏಕಾಏಕಿ ನಾಯಿ ಅಡ್ಡ ಬಂತೆನ್ನಲಾಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದಿದೆ. ಈ ವೇಳೆ ಮಹಾಬಲ ಶೆಟ್ಟಿಯವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಅವರ ಹಿಂದಿನಿಂದ ಬೈಕಿನಲ್ಲಿ ಬರುತ್ತಿದ್ದ ಕಲ್ಲೆಂಬಿಯ ಪ್ರವೀಣ್ ಎಂಬವರು ತಕ್ಷಣ ಸ್ಥಳೀಯರ ಸಹಕಾರದಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.

Similar News