×
Ad

ಧ್ರುವನಾರಾಯಣ್ ನಿಧನಕ್ಕೆ ಖರ್ಗೆ, ರಾಹುಲ್ ಗಾಂಧಿ ಸಂತಾಪ

Update: 2023-03-11 11:35 IST

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್  ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾಜಿ ಸಂಸದ ಆರ್. ಧ್ರುವನಾರಾಯಣ್ ಹಠಾತ್ ನಿಧನದಿಂದ ದುಃಖವಾಗಿದೆ. ಕಷ್ಟಪಟ್ಟು ದುಡಿಯುವ ಮತ್ತು ತಳಮಟ್ಟದ ನಾಯಕ, NSUI ಮತ್ತು ಯೂತ್ ಕಾಂಗ್ರೆಸ್ ಮೂಲಕ ಬಂದ ಸಾಮಾಜಿಕ ನ್ಯಾಯದ ನಾಯಕರಾಗಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವಾಗಿದ್ದು, ಅವರ ಕುಟುಂಬಕ್ಕೆ ನನ್ನ ಸಂತಾಪಗಳು'' ಎಂದು ತಿಳಿಸಿದ್ದಾರೆ.

ಆರ್ ಧ್ರುವನಾರಾಯಣ ಅವರ ನಿಧನದಿಂದ ತೀವ್ರ ದುಃಖ ಮತ್ತು ನೋವಾಗಿದೆ. ಅವರು ಕೇವಲ ತಳಮಟ್ಟದ ರಾಜಕೀಯ ವ್ಯಕ್ತಿಯಾಗಿರಲಿಲ್ಲ, ಅವರು ಅತ್ಯುತ್ತಮ ವ್ಯಕ್ತಿಯಾಗಿದ್ದರು. ಅವರ ನಿಧನವು ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ನಷ್ಟವಲ್ಲ. ನನಗೂ ವೈಯಕ್ತಿಕವಾಗಿ ದೊಡ್ಡ ನಷ್ಟವಾಗಿದೆ ಎಂದು ಧ್ರುವನಾರಾಯಣ್‌ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ. 

''ಜನಪ್ರಿಯ ನಾಯಕರು, ಕೆಪಿಸಿಸಿ ಕಾರ್ಯಾಧ್ಯಕ್ಷ ಶ್ರೀ ಆರ್.ಧ್ರುವನಾರಾಯಣ ಅವರು ಇಂದು ಹಠಾತ್ ನಿಧನರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಒಬ್ಬ ಸಕ್ರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. 

Similar News