ಪಾವಗಡ | ಗುಡಿಸಲಿಗೆ ಆಕಸ್ಮಿಕ ಬೆಂಕಿ: 15 ಮೇಕೆಗಳು ಸಜೀವ ದಹನ
Update: 2023-03-11 13:49 IST
ಪಾವಗಡ: ಗುಡಿಸಿಲಿನಲ್ಲಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿ ಇದ್ದಂತಹ ವಸ್ತುಗಳು ಮತ್ತು ಮೇಕೆಗಳು ಸಜೀವ ದಹನ ವಾಗಿರುವ ಘಟನೆ ತಾಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ವರದಿಯಾಗಿದೆ.
ಬೂದಿ ಬೆಟ್ಟ ಗ್ರಾಮದ ಬಂಗಾರಪ್ಪ ಎಂಬುವರ ಕೊಟ್ಟಿಗೆಯಲ್ಲಿದ್ದ ಸುಮಾರು 15 ಮೇಕೆಗಳು, ಮನೆಯಲ್ಲಿದ್ದ 50,000 ಹಣ ಕೊಟ್ಟಿಗೆ ಮನೆಗೆ ಬೆಂಕಿ ಕಾಣಿಸಿಕೊಂಡಿದ್ದು ಈ ಅನಾಹುತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಈ ವೇಳೆ ಸ್ಥಳೀಯರು ಎಚ್ಚೆತ್ತುಕೊಂಡು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪ್ರಕರಣ ವೈ ಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.