ಮಾ.12: ಬೆಳ್ತಂಗಡಿ ಹೈದರ್ ನಿರ್ಸಾಲ್ ಚಾರಿಟೇಬಲ್ ಟ್ರಸ್ಟ್ ನಿಂದ ಆ್ಯಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ
Update: 2023-03-11 15:06 IST
ಬೆಳ್ತಂಗಡಿ, ಮಾ.11: ಬೆಳ್ತಂಗಡಿಯ ಮರ್ಹೂಮ್ ಹೈದರ್ ನಿರ್ಸಾಲ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ ಸಮಾರಂಭವು ಮಾ.12ರಂದು ಬೆಳಗ್ಗೆ 9:30ಕ್ಕೆ ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಸಭಾಭವನದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಟ್ರಸ್ಟ್ ನ ಆ್ಯುಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ರಕ್ತನಿಧಿಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಮುಖಂಡರು, ಧರ್ಮ ಗುರುಗಳು, ಹೈದರ್ ನಿರ್ಸಾಲ್ ಕುಟುಂಬಸ್ಥರು ಮತ್ತು ಊರಿನ ಹಿರಿಯರು ಇನ್ನಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.