×
Ad

ಮಾ.13ರಂದು ನಿಗದಿಯಾಗಿದ್ದ 5, 8ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ಮುಂದೂಡಿಕೆ

Update: 2023-03-11 20:02 IST

ಬೆಂಗಳೂರು, ಮಾ. 11: ಪ್ರಸಕ್ತ ವರ್ಷದ 5 ಮತ್ತು 8ನೆ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್‍ನ ಆದೇಶದಂತೆ ಮುಂದೂಡಲಾಗಿದ್ದು, ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ. 

ಪಬ್ಲಿಕ್ ಪರೀಕ್ಷೆಯು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ವಿಷಯದಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ತಿಳಿಯುವುದಾಗಿದೆ. ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವುದು ಈ ಮೌಲ್ಯಂಕನದ ಉದ್ದೇಶವಾಗಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ತೆರವು

Similar News