ಬಿಜೆಪಿ ತೊರೆದು ಜೆಡಿಎಸ್ ಸೇರಿದ ಮಾಜಿ ಸಚಿವ ಎ.ಮಂಜು

Update: 2023-03-11 15:32 GMT

ರಾಮನಗರ: ಮಾ.11: ಮಾಜಿ ಸಚಿವ ಎ. ಮಂಜು ಬಿಜೆಪಿಯನ್ನು ತೊರೆದು ಇಂದು ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆ ಆಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆಗೊಂಡರು.

ಮಾಜಿ ಸಚಿವ ಎ.ಮಂಜು ಅವರು ವಿಧಾನಪರಿಷತ್ ಚುನಾವಣೆಯ ಬಳಿಕ‌ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಅಲ್ಲದೇ ಕಾಂಗ್ರೆಸ್ ಟಿಕೆಟ್ ಗೆ ಪ್ರಯತ್ನ‌‌ ಮಾಡಿದ್ದರು. ''ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ ಎಂಬುದು ನಿಜ. ಕಾಂಗ್ರೆಸ್‌ನವರು ನಮ್ಮನ್ನು ಗುರುತಿಸುವಲ್ಲಿ ವಿಫಲರಾದರು'' ಎಂದು ಮಂಜು ಅವರು ಈ ಹಿಂದೆ ಮಾಧ್ಯಮಗಳಿಗೆ ಹೇಳಿಕೊಂಡಿದ್ದರು. 

ಅರಕಲಗೂಡು ಕ್ಷೇತ್ರದಿಂದ ಟಿಕೆಟ್

'ಅರಕಲಗೂಡು ಕ್ಷೇತ್ರದಿಂದ ಮಾಜಿ ಸಚಿವ ಎ.ಮಂಜು ಅವರು ಜೆಡಿಎಸ್ ಅಭ್ಯರ್ಥಿ ಆಗಲಿದ್ದಾರೆ' ಎಂದು ಈಗಾಗಲೇ ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ. 

ಇದನ್ನೂ ಓದಿ: ಅರಕಲಗೂಡು ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ನಾಯಕನಿಗೆ ಜೆಡಿಎಸ್ ನಿಂದ ಟಿಕೆಟ್!

Similar News