ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ
ಸುಳ್ಯ: ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಶನಿವಾರ ಸಂಪಾಜೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಿತ್ತು. ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದ ರಸ್ತೆಯುದ್ದಕ್ಕೂ ರೋಡ್ ಶೋ ನಡೆಯಿತು.
ಸುಳ್ಯ ನಗರದ ವಿಷ್ಣು ಸರ್ಕಲ್‍ನಿಂದ ಜ್ಯೀತಿ ವೃತ್ತದ ವರೆಗೆ ಸುಮಾರು ಒಂದೂವರೆ ಕಿ.ಮಿ. ನಡೆದ ರೋಡ್ ಶೋನಲ್ಲಿ ಸಾವಿರಾರು ಮಂದಿ ಕಾರ್ಯಕರ್ತರು, ಸಿಡಿಮದ್ದಿನ ಅಬ್ಬರ, ಚೆಂಡೆ, ವಾದ್ಯ ಮೇಳಗಳ ತಾಳಗಳು, ನಾಸಿಕ್ ಬ್ಯಾಂಡ್, ಗೊಂಬೆಯಾಟದ ಆಕರ್ಷಣೆಯೊಂದಿಗೆ ಕಾರ್ಯಕರ್ತರ ಕಂಠದಿಂದ ಹೊರ ಹೊಮ್ಮಿದ ಮುಗಿಲು ಮುಟ್ಟಿದ ಘೋಷಣೆಗಳೊಂದಿಗೆ ಮೆರವಣಿಗೆ ಸಾಗಿ ಬಂತು.
ರೋಡ್ ಶೋ ಸಮಾರೋಪದಲ್ಲಿ ಮಾತನಾಡಿದ ಇಂಧನ ಸಚಿವ ಸುನಿಲ್ ಕುಮರ್ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವಾಗ ಎಲ್ಲೆಡೆ ಅಶಾಂತಿಯ ವಾತಾವರಣ ಇತ್ತು. ಬಿಜೆಪಿ ಸರಕಾರ ಬಂದ ಬಳಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಕಾರಣ ರಾಜ್ಯ ಪ್ರಗತಿ ಕಂಡಿದೆ. ಅಭಿವೃದ್ಧಿಗಾಗಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರಕಾರದ ಅಗತ್ಯತೆ ಇದೆ. ರಾಜ್ಯದಲ್ಲಿ 4 ವಿಭಾಗಗಳಲ್ಲಿ ರಥಯಾತ್ರೆ ನಡೆಯುತ್ತಿದೆ. ಕೇಂದ್ರ ಮತ್ತು ರಾಜ್ಯದ ಡಬ್ಬಲ್ ಇಂಜಿನ್ ಸರಕಾರದಿಂದ ಹಲವು ಜನಪರ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿದೆ. 1.50 ಲಕ್ಷ ಜನರಿಗೆ ಕಿಶನ್ ಸಮ್ಮಾನ್, ರಾಜ್ಯ ಹೆದ್ದಾರಿಗಳಾಗಿದನ್ನು ರಾಷ್ಟ್ರೀಯ ಹೆದ್ದಾರಿಗಳಾನ್ನಾಗಿ ಮಾಡಲಾಗಿದೆ. ಯುವಕರ ಕೈಗೆ ಉದ್ಯೋಗ ನೀಡಲಾಗಿದೆ. ಗ್ರಾಮವನ್ ಯೋಜನೆಗಳು ಜನರಿಗೆ ಬಲ ತಂದುಕೊಟ್ಟಿದೆ ಎಂದರು.
ರೋಡ್ ಶೋದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವರಾದ ಎಸ್.ಅಂಗಾರ, ವಿ.ಸುನಿಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಪ್ರಧಾನ ಕಾರ್ಯದರ್ಶಿಗಳಾದ ರಾಮ್‍ದಾಸ್ ಬಂಟ್ವಾಳ, ಕಸ್ತೂರಿ ಪಂಜ, ಕಾರ್ಯದರ್ಶಿ ಪೂಜಾ ಪೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್ ಮತ್ತಿತರರು ರಥದಲ್ಲಿದ್ದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಜಿಲ್ಲಾ ಸಮಿತಿ ಸದಸ್ಯ ವೆಂಕಟ್ ದಂಬೆಕೋಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್,ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.