ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

Update: 2023-03-12 08:05 GMT

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಸಮಾವೇಶದ ವೇದಿಕೆಯಲ್ಲಿ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. 

ಇದೇ ವೇಳೆ ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿಗೆ ಮೋದಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Similar News