×
Ad

ಚಾಮರಾಜನಗರ: ಸರಕಾರಿ ಗೌರವಗಳೊಂದಿಗೆ ಧ್ರುವನಾರಾಯಣ ಅಂತ್ಯಕ್ರಿಯೆ

Update: 2023-03-12 16:01 IST

ಚಾಮರಾಜನಗರ: ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರಾದ ಚಾಮರಾಜನಗರ ತಾಲೂಕಿನ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಹೆಗ್ಗವಾಡಿ ಗ್ರಾಮದ ತೋಟದಲ್ಲಿ ಸಾವಿರಾರು ಅಭಿಮಾನಿಗಳು, ಬಂಧು ಬಳಗದವರ ಸಮ್ಮುಖದಲ್ಲಿ  ನೆರವೇರಿತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಸ್ ಬಾಲರಾಜು ಸೇರಿದಂತೆ ಹಲವಾರು ರಾಜಕೀಯ ಮುಖಂಡರುಗಳು ಧ್ರುವನಾರಾಯಣ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಧ್ರುವನಾರಾಯಣ ಅವರ ಪುತ್ರ ದರ್ಶನ್ ಧಾರ್ಮಿಕ ವಿಧಿ ವಿಧಾನ ಕಾರ್ಯಗಳನ್ನು ನೆರವೇರಿಸಿದರು. 

Similar News