×
Ad

ಉಡುಪಿ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ

Update: 2023-03-12 20:44 IST

ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಸ್ತೂರ್ಬಾ ನಗರ ಹಾಗೂ ಇಂದಿರಾನಗರ ವಾರ್ಡ್ ವ್ಯಾಪ್ತಿಯ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮವು ಕಸ್ತೂರ್ಭಾನಗರದ ಬಬ್ಬಸ್ವಾಮಿ ದೈವಸ್ಥಾನದ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳನ್ನು ಬೂತ್ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತಲುಪಿಸಿ ಕಾಂಗ್ರೆಸ್ ಪಕ್ಷದ ೩ ಜನಪರ ಯೋಜನೆಗಳನ್ನು ಜನರಿಗೆ ಮನದಟ್ಟು ಮಾಡಬೇಕು. ಈ ಯೋಜನೆಗಳಿಂದ ಜನಸಾಮಾನ್ಯರಿಗೆ ಬಹಳಷ್ಟು ಸಹಕಾರಿ ಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿವಾಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ಪ್ರಸಾದ್‌ರಾಜ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಅಮೃತ್ ಶೆಣೈ, ಅಣ್ಣಯ್ಯ ಶೇರಿಗಾರ್, ಶಾಂತಾರಾಮ್ ಸಾಲ್ವಂಕರ್, ಶಶಿರಾಜ್ ಕುಂದರ್, ಮೊಹಮ್ಮದ್ ಶೀಶ್, ಹೇಮಲತಾ ಹಿಲಾರಿ, ನಾಸಿರ್ ಯಾಕೂಬ್, ಪ್ರಣಮ್ ಉಪಸ್ಥಿತರಿದ್ದರು.

Similar News