ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಆಸ್ಪತ್ರೆಗೆ ದಾಖಲು
Update: 2023-03-12 21:22 IST
ಮೈಸೂರು,ಮಾ.12: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಇಲ್ಲಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆನೋವು ಕಾಣಿಸಿ ಕೊಂಡ ಕಾರಣ ತುರ್ತು ತಪಾಸಣೆಗೆ ಅವರು ರವಿವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು.
ಆಂಜಿಯೊಗ್ರಾಮ್ ಸೇರಿದಂತೆ ವಿವಿಧ ತಪಾಸಣೆ ಮಾಡಿಸಲಾಗಿದೆ. ಆತಂಕಪಡುವ ಅಗತ್ಯ ಇಲ್ಲ, ವಿಶ್ರಾಂತಿ ಪಡೆಯಿರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸಂಜೆವರೆಗೂ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.