ಹಿಂದೂಗಳಲ್ಲಿಯೂ ಕೆಲ ತಲೆಹರಟೆಗಳಿದ್ದಾರೆ: ಕೆ.ಎಸ್.ಈಶ್ವರಪ್ಪ

Update: 2023-03-13 14:52 GMT

ಶಿವಮೊಗ್ಗ, ಮಾ.13: 'ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು. ಹಿಂದೂಗಳಲ್ಲಿಯೂ ಕೆಲ ತಲೆಹರಟೆಗಳಿದ್ದಾರೆ. ನಾನು ಇಲ್ಲ ಅನ್ನಲ್ಲ, ಮುಸ್ಲಿಮರಲ್ಲಿಯೂ ತಲೆಹರಟೆಗಳಿದ್ದಾರೆ. ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆಹರಟೆ ಕೆಲಸ ಮಾಡಿದಾಗ ಗಲಾಟೆ ಶುರುವಾಗುತ್ತದೆ' ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.

ಅಲ್ಪಸಂಖ್ಯಾತ ಮುಖಂಡರು ಕೆ.ಎಸ್.ಈಶ್ವರಪ್ಪನವರೊಂದಿಗೆ ಸೇರಿದ್ದ ಸಭೆಯಲ್ಲಿ ಮಾಜಿ ಸಚಿವರು ಮಾತನಾಡಿದ್ದಾರೆ.ಈ ಕುರಿತು ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಮೊಹಮ್ಮದ್ ಶಫಿ ಎಂಬವರ ಫೇಸ್‌ಬುಕ್‌ನಲ್ಲಿ, ಈ ವಿಡಿಯೋ ಮೊದಲು ಪ್ರಕಟವಾಗಿದ್ದು, ಆನಂತರ ಸಾಮಾಜಿಕ ತಾಣದಲ್ಲಿ ಪರ-ವಿರೋಧ ಚರ್ಚೆಗೆ ಅವಕಾಶ ಒದಗಿಸಿದೆ.

''ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು. ಹಿಂದೂಗಳಲ್ಲಿಯೂ ಕೆಲ ತಲೆಹರಟೆಗಳಿದ್ದಾರೆ. ನಾನು ಇಲ್ಲ ಅನ್ನಲ್ಲ. ಮುಸ್ಲಿಮರಲ್ಲಿಯೂ ತಲೆಹರಟೆಗಳಿದ್ದಾರೆ. ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆಹರಟೆ ಕೆಲಸಮಾಡಿದಾಗ ಗಲಾಟೆ ಶುರುವಾಗುತ್ತದೆ, ಇಲ್ಲಾಂದ್ರೆ ತಣ್ಣಗೆ ಇರುತ್ತದೆ. ನಾನು ತಪ್ಪು ಮಾಡಿದ್ರೆ ಇಲ್ಲಿಯೇ ಸಭೆಯಲ್ಲಿ ಹೇಳಿ, ಸಮಾಜದಲ್ಲಿ ಅಣ್ಣತಮ್ಮಂದಿರಂತೆ ಇರುತ್ತೇವೆ'' ಎಂದು ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಸದ್ಯ ಈ ವಿಡಿಯೋದ ಸ್ಕ್ರೀನ್ ರೆಕಾರ್ಡ್‌ಗಳು ವಾಟ್ಸ್ಯಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದ್ದು, ಮಾಜಿ ಸಚಿವರ ಹೇಳಿಕೆಯನ್ನು ತಮ್ಮದೇ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ಅಲ್ಲದೆ ಈ ಸಂಬಂಧ ಚರ್ಚೆಗಳು ಸಹ ನಡೆಯುತ್ತಿವೆ.

Full View

Similar News