ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

Update: 2023-03-13 13:41 GMT

ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್‌ಸಿಎಚ್ ವಿಭಾಗ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಯ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೊಕ್ಕಪಟ್ಟಣದ ಸರಕಾರಿ ಹಿ.ಪ್ರಾ ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಸೋಮವಾರ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಚಾಲನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನೇತ್ರಾವತಿ ಲಯನ್ಸ್ ಕ್ಲಬ್ ಅಧ್ಯಕ್ಷ ಆಶಾ ನಾಗರಾಜ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ರಾಜೇಶ್ ಬಿ., ಮಂಗಳೂರಿನ ಸಿಆರ್‌ಪಿ ಸ್ವೀಟ್ ವೇಗಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಸುಜಯ್ ಭಾಗವಹಿಸಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಸ್ವಾಗತಿಸಿದರು. ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು. ಲಿಲ್ಲಿ ಮೆನೇಜಸ್ ವಂದಿಸಿದರು.

Similar News