ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ವಿಚಾರ: ಡಿಕೆಶಿ, ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನರಾಗಿದ್ದರಿಂದ ನಂಜನಗೂಡು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅವರ ಪುತ್ರನಿಗೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ''ಆ ಬಗ್ಗೆ ಇನ್ನೂ ಚರ್ಚೆ ನಡೆಸಿಲ್ಲ'' ಎಂದು ಹೇಳಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ''ಪಕ್ಷದ ನಿಷ್ಠಾವಂತ ನಾಯಕರಾದ ಧ್ರುವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ಅದನ್ನು ನೀಡಿದ್ದೇನೆ. ಧ್ರುವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ. ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧ್ರುವನಾರಾಯಣ ಅವರು. ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದೆ'' ಎಂದು ತಿಳಿಸಿದ್ದಾರೆ.