ತಮಿಳುನಾಡಿನಲ್ಲಿ ವಲಸಿಗ ಕಾರ್ಮಿಕರ ಮೇಲೆ ಹಲ್ಲೆ: ಹಿಂದುತ್ವ ಸಂಘಟನೆಯ ಇಬ್ಬರು ಕಾರ್ಯಕರ್ತರ ಸಹಿತ ನಾಲ್ವರ ಬಂಧನ

Update: 2023-03-14 09:37 GMT

ಚೆನ್ನೈ: ವಲಸಿಗ ಕಾರ್ಮಿಕರ (Migrant Workers) ಮೇಲೆ ಹಲ್ಲೆಗೈದ ಆರೋಪದ ಮೇಲೆ ಇಬ್ಬರು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು indianexpress.com ವರದಿ ಮಾಡಿದೆ. 

ಆಭರಣ ತಯಾರಿ ಕಾರ್ಖಾನೆಯಲ್ಲಿ ಕೆಲಸ ಮಾಡುವ ಗೌತಮ್‌ ಕಥುವಾ ಎಂಬಾತ ತನ್ನ ಇಬ್ಬರು ಸ್ನೇಹಿತರೊಂದಿಗೆ  ನಗರದ ಟೌನ್‌ ಹಾಲ್‌ ಪ್ರದೇಶದಲ್ಲಿ ಸಾಗುತ್ತಿದ್ದಾಗ  ನಾಲ್ಕು ಮಂದಿಯ ತಂಡ ಅವರನ್ನು ತಡೆದು ಅವರೊಂದಿಗೆ ಜಗಳವಾಡಿ ಹಲ್ಲೆ ನಡೆಸಿತ್ತೆಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ಮರಳಿದ್ದ ಸ್ನೇಹಿತರು ತಮ್ಮ ಸಹೋದ್ಯೋಗಿಗಳಿಗೆ ತಮ್ಮ ಮೇಲಾದ ಹಲ್ಲೆ ಬಗ್ಗೆ ವಿವರಿಸಿದ್ದರು. ಅವರು ದಾಖಲಿಸಿದ್ದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 294 ಹಾಗೂ 323 ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಸಿಸಿಟಿವಿ ದೃಶ್ಯವನ್ನಾಧರಿಸಿ ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಹಿಂದು ಮುನ್ನಾನಿ (Hindu Munnani) ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ವಲಸಿಗ ಕಾರ್ಮಿಕರು ಸುರಕ್ಷಿತರಾಗಿದ್ದಾರೆಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ (Tamil Nadu CM M K Stalin) ಭರವಸೆ ನೀಡಿದ ಬೆನ್ನಿಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಅಭಿವೃದ್ಧಿ ಕೆಲಸ ಕುರಿತು ಸಚಿವೆಯನ್ನು ಪ್ರಶ್ನಿಸಿದ ಪತ್ರಕರ್ತನನ್ನು ಬಂಧಿಸಿದ ಪೊಲೀಸರು

Similar News