×
Ad

ಹಾವೇರಿ: ಮಸೀದಿ, ಶಾಲೆ, ಮನೆಗಳ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಕಲ್ಲು ತೂರಾಟ

Update: 2023-03-14 17:11 IST

ಹಾವೇರಿ, ಮಾ.14: ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಮಂಗಳವಾರ ವರದಿಯಾಗಿದೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ಇಂದು ರಟ್ಟೀಹಳ್ಳಿಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಪ್ರಮುಖ ಬೀದಿಯಲ್ಲಿ ಬೈಕ್ ರ‍್ಯಾಲಿ ಏರ್ಪಡಿಸಿದ್ದರು. ಈ ವೇಳೆ ಕಾರ್ಯಕರ್ತರು ಮಸೀದಿ, ಮನೆಗಳು ಹಾಗೂ ಉರ್ದು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆನ್ನಲಾಗಿದೆ. ಅಲ್ಲದೇ, ಆಟೋ ಚಾಲಕರೊಬ್ಬರಿಗೆ ಥಳಿಸಿರುವ ಘಟನೆಯೂ ವರದಿಯಾಗಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು ಗಲಾಟೆ ಚದುರಿಸಿ ನಗರದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. 

Similar News