ಬಿವಿಟಿಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ
Update: 2023-03-14 18:53 IST
ಉಡುಪಿ, ಮಾ.14: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿ ಮಾ.27ರಿಂದ ಎ.1ರವರೆಗೆ (ಒಟ್ಟು 6 ದಿನಗಳು) ವಿವಿಧ ಶೈಲಿಯ ಕುಪ್ಪಸ (ರವಕೆಗಳು) ಮತ್ತು ಬ್ರೈಡಲ್ ಮೆಹಂದಿ ಬಗ್ಗೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು/ ಯುವತಿ ಯರು ಈ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬಹುದು. (ಹೊಲಿಗೆಯಲ್ಲಿ ಅನುಭವವಿರುವ ಮಹಿಳೆಯರಿಗೆ ಆದ್ಯತೆ) ತರಬೇತಿಯ ಸಮಯದಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಇದೆ.
ಅಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿಹಾಳೆಯಲ್ಲಿ ಬರೆದು ಮಾ.23ರ ಒಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ- 576102 ಇಲ್ಲಿಗೆ ಕಳುಹಿಸಿಕೊಡಬಹುದು. ಅಥವಾ ದೂರವಾಣಿ ಸಂಖ್ಯೆ:0820-2570263, ಮೊಬೈಲ್ ಸಂಖ್ಯೆ:8970891031 ಸಂಪರ್ಕಿ ಸುವ ಮೂಲಕ ದೃಢೀಕರಿಸಬಹುದು ಎಂದು ಸಂಸ್ಥೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.