ತುಮಕೂರು: ಪತ್ನಿ, ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

ಪತ್ನಿ ಮೃತ್ಯು, ಮಕ್ಕಳು ಆಸ್ಪತ್ರೆಗೆ ದಾಖಲು

Update: 2023-03-14 14:27 GMT

ತುಮಕೂರು.ಮಾ.14: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಕ್ಕಳು ಮಲಗಿದ್ದ ವೇಳೆ ಅವರ ಮೈಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಮನೆಯಿಂದ ಹೊರಹೋಗದಂತೆ ಬಾಗಿಲು ಹಾಕಿಕೊಂಡು ಹೋಗಿರುವ ಘಟನೆ ಮಧುಗಿರಿ ತಾಲೂಕು ಮದ್ದನೇರಳೆಕೆರೆ ಗ್ರಾಮದಲ್ಲಿ ವರದಿಯಾಗಿದೆ.

ಪತ್ನಿ ಮತ್ತು ಮಕ್ಕಳು ಮಲಗಿದ್ದ ವೇಳೆ ಅವರ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರೂಮಿಗೆ ಬೀಗ ಹಾಕಿ ಪರಾರಿಯಾಗಿದ್ದು, ಪತ್ನಿ ಶಾಂತಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮಕ್ಕಳಾದ ಅಕ್ಷಯ(18),ಅಕ್ಷತಾ(13) ಮತ್ತು ಅಮೃತಾ(10)ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಇವರಲ್ಲಿ ಒಬ್ಬರನ್ನು ಮಧುಗಿರಿ ಆಸ್ಪತ್ರೆಗೆ ದಾಖಲಿಸಿದ್ದು, ಉಳಿದ ಇಬ್ಬರನ್ನು ಮಧುಗಿರಿಯಿಂದ ತುಮಕೂರು, ತುಮಕೂರಿನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Similar News