‘ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ’ ಪ್ರಯಾಣಿಕರಿಂದ ಬಳಕೆದಾರ ಶುಲ್ಕ ಸಂಗ್ರಹ: KSRTC

Update: 2023-03-14 15:17 GMT

ಬೆಂಗಳೂರು, ಮಾ.14: ಬೆಂಗಳೂರು-ಮೈಸೂರು ಮಾರ್ಗದಲ್ಲಿ ನೂತನವಾಗಿ ನಿರ್ಮಿಸಿರುವ ಎಕ್ಸ್ ಪ್ರೆಸ್ ಹೈವೇಯ ಮೊದಲನೆ ಹಂತದ ಬೆಂಗಳೂರು-ನಿಡಘಟ್ಟ ಮಧ್ಯದಲ್ಲಿನ ಕಣಿಮಿಣಿಕೆ ಟೋಲ್ ಮುಖಾಂತರ ಚಲಿಸುವ ಬಸ್ಸುಗಳಿಗೆ ಮಾ.14ರಿಂದ ಬಳಕೆದಾರ ಶುಲ್ಕವನ್ನು ಸಂಗ್ರಹಿಸಲಾಗುವುದು ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವ ತಲಾ ಪ್ರಯಾಣಿಕರಿಂದ 15 ರೂ., ರಾಜಹಂಸ ಬಸ್ಸುಗಳಲ್ಲಿ 18 ರೂ., ಹಾಗೂ ಇತರೆ ಬಸ್ಸು ಹಾಗೂ ಮಲ್ಟಿ ಆಕ್ಸಲ್ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ 20 ರೂ.ಗಳನ್ನು ಬಳಕೆದಾರರ ಶುಲ್ಕವನ್ನಾಗಿ ಸಂಗ್ರಹಿಸಲಾಗುತ್ತದೆ. ಈ ಶುಲ್ಕವು ಸಂಪೂರ್ಣವಾಗಿ ಎಕ್ಸ್‍ಪ್ರೆಸ್ ಹೈವೇ ಮೂಲಕ ಚಲಿಸುವ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾತ್ರ ಅನ್ವಯವಾಗುತ್ತದೆ. ಇನ್ನುಳಿದ ಸಾರಿಗೆಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಕೆಎಸ್ಸಾರ್ಟಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

Similar News