ಲೈಂಗಿಕ ಅಲ್ಪಸಂಖ್ಯಾತರ ಮದುವೆ ವಿಚಾರ | ಕೇಂದ್ರ ಸರಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಲಿ: ಅಕ್ಕೈ ಪದ್ಮಶಾಲಿ

Update: 2023-03-14 16:09 GMT

ಬೆಂಗಳೂರು, ಮಾ.14: ಲೈಂಗಿಕ ಅಲ್ಪಸಂಖ್ಯಾತರ ಮದುವೆಯ ವಿಚಾರವಾಗಿ ಸರಕಾರವು ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಒತ್ತಾಯಿಸಿದ್ದಾರೆ. 

ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‍ನಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಮದುವೆಯ ಹಕ್ಕನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವುದು ಲೈಂಗಿಕ ಅಲ್ಪಸಂಖ್ಯಾತರಿಗೆ ಬೇಸರ ತಂದಿದೆ. ಮದುವೆ ಹಕ್ಕನ್ನು ಕೊಡಲು ಮತ್ತು ನಿರಾಕರಿಸಲು ಸರಕಾರ ಹೇಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. 

ಲೈಂಗಿಕ ಅಲ್ಪಸಂಖ್ಯಾತರು ಮದುವೆಯಾಗಿ ದತ್ತು ಮಕ್ಕಳನ್ನು ಪಡೆದುಕೊಂಡಿರುವ ಉದಾಹರಣೆಗಳಿವೆ. ಸಂಸತ್ತಿನಲ್ಲಿ ನಮ್ಮ ಬಗ್ಗೆ ಅರ್ಥ ಮಾಡಿಕೊಳ್ಳಲು ಯಾರು ಇಲ್ಲ. ಸಮುದಾಯದ ಬಗ್ಗೆ ಸರಿಯಾಗಿ ಅರ್ಥ ಮಾಡಿಕೊಳ್ಳದೆ, ಯಾವ ಕಾಯ್ದೆಗಳನ್ನು ಮಾಡಲು ಸಾಧ್ಯವಾಗುತ್ತದೆ. ಲೈಂಗಿಕ ಅಲ್ಪಸಂಖ್ಯಾತ ವಿವಾಹದ ಕುರಿತು ಸಂವಿಧಾನಿಕ ಪೀಠವನ್ನು ರಚನೆ ಮಾಡಿರುವುದು ಸ್ವಗತಾರ್ಹವಾಗಿದೆ ಎಂದು ಅವರು ತಿಳಿಸಿದರು. 

ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಸೇರಿಸಲಾಗಿದೆ. ಈ ಕಾಯ್ದೆಯಡಿಯಲ್ಲಿ ವ್ಯಕ್ತಿಗಳು ಎಂಬ ಪದವನ್ನು ಬಳಸಿದರೆ ಸೂಕ್ತವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 
ಪತ್ರಿಕಾಗೋಷ್ಟಿಯಲ್ಲಿ ವಕೀಲ ಅರವಿಂದ ನಾರಾಯಣ, ಉಮಾ, ಕ್ರಿಸ್ಟಿ ರಾಜ್, ರಕ್ಷಿತಾ ಮತ್ತಿರರು ಉಪಸ್ಥಿತರಿದ್ದರು. 

Similar News