ಚಾರ್ಮಾಡಿ: ರಸ್ತೆ, ಕುಡಿಯುವ ನೀರಿನ ಬೇಡಿಕೆ ಈಡೇರಿಸಲು ಒತ್ತಾಯಿಸಿ ಚುನಾವಣೆ ಬಹಿಷ್ಕಾರ

Update: 2023-03-14 16:40 GMT

ಬೆಳ್ತಂಗಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಪ್ರಕಟಿಸಿದ್ದಾರೆ.

ಚಾರ್ಮಾಡಿಯ ಮಸಣ ಗುಡ್ಡೆ, ಗಾಂದಿನಗರ ಪರಿಸರದಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ, ಕುಡಿಯಲು ನೀರೂ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರೂ ಇನ್ನೂ ರಸ್ತೆ ದುರಸ್ತಿಯಾಗಿಲ್ಲ, ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿಲ್ಲ, ಈ ಬಗ್ಗೆ ಭರವಸೆಗಳನ್ನು ಕೇಳಿ ಸಾಕಾಗಿದೆ ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದಿಲ್ಲ ಎಂದು ಈ ಪ್ರದೇಶದ ಜನರು ಪ್ರಕಟಿಸಿದ್ದಾರೆ.

ನಮಗೆ ರಸ್ತೆ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟರೆ ಮಾತ್ರ ರಾಜಕಾರಣಿಗಳು ಮತ ಕೇಳಲು ಇಲ್ಲಿಗೆ ಬಂದರೆ ಸಾಕು ಎಂಬುದು ಇಲ್ಲಿನ ಜನರ ಒತ್ತಾಯವಾಗಿದೆ.

ಈ ಪ್ರದೇಶದಲ್ಲಿ ಸುಮಾರು 100ರಷ್ಟು ಮನೆಗಳಿವೆ ಪ್ರತಿ ಬೇಸಗೆಯಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ಇಲ್ಲಿನ ನಿವಾಸಿಗಳದ್ದಾಗಿದೆ ಎಂದು ತಿಳಿಸಿದ್ದಾರೆ.

Similar News