×
Ad

ಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Update: 2023-03-14 23:33 IST

ಚೆನ್ನೈ: ಮದ್ರಾಸ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಟೆಕ್ನಾಲಜಿ (ಐಐಟಿ)ಯಲ್ಲಿ ಬಿಟೆಕ್ ಪದವಿಯ ಮೂರನೇ ವರ್ಷದ ವಿದ್ಯಾರ್ಥಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  

ಮೃತಪಟ್ಟ ವಿದ್ಯಾರ್ಥಿಯನ್ನು ಪುಷ್ಪಕ್ ಎಂದು ಗುರುತಿಸಲಾಗಿದೆ. ಈತ ಆಂಧ್ರಪ್ರದೇಶದ ನಿವಾಸಿ. ಕಳೆದ ಎರಡು ತಿಂಗಳ ಅವಧಿಯಲ್ಲಿ ಐಐಟಿಯಲ್ಲಿ ಸಂಭವಿಸುತ್ತಿರುವ ಮೂರನೇ ಆತ್ಮಹತ್ಯೆ ಇದಾಗಿದೆ.

ಬೆಳಗ್ಗೆ ಪುಷ್ಪಕ್ ಕಾಣದೇ ಇದ್ದಾಗ ಇತರ ವಿದ್ಯಾರ್ಥಿಗಳು   ಹುಡಕಾಡಿದ್ದಾರೆ. ಅನಂತರ ಅಳಕಾನಂದ ಹಾಸ್ಟೆಲ್ ಕೊಠಡಿಯಲ್ಲಿ ಪರಿಶೀಲಿಸಿದಾಗ ಪುಷ್ಪಕ್‌ನ ಮೃತದೇಹ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. 

Similar News