×
Ad

ನೀರಿನ ಮಟ್ಟ ಇಳಿಕೆ: ಶಾಸಕರಿಂದ ಬಜೆ ಡ್ಯಾಂ ಪರಿಶೀಲನೆ

Update: 2023-03-15 21:23 IST

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಹೊಂದಿ ಕೊಂಡಿರುವ ಗ್ರಾಮ ಪಂಚಾಯತ್‌ಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ಬಜೆ ಡ್ಯಾಮ್ ಹಾಗೂ ಶಿರೂರು ಡ್ಯಾಮ್‌ಗೆ ಶಾಸಕ ಕೆ.ರಘುಪತಿ ಭಟ್ ನಗರ ಸಭೆಯ ಅಧಿಕಾರಿಗಳೊಂದಿಗೆ ಇಂದು ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು.

ಮುಂದಿನ ದಿನಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಲಿರುವುದರಿಂದ ನೀರಿನ ಪಂಪಿಂಗ್ ಹಾಗೂ ನೀರಿನ ಪೂರೈಕೆಗೆ ಬೇಕಾಗುವ ಪೂರ್ವ ತಯಾರಿ ಕೈಗೊಳ್ಳುವ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ನಗರಸಭಾ ಸದಸ್ಯ ಗಿರೀಶ್ ಅಂಚನ್, ಪೌರಾಯುಕ್ತ ಆರ್.ಪಿ.ನಾಯ್ಕ್, ಸಹಾಯಕ ಕಾರ್ಯಪಾಲಕ ಅಭಿಯಂತರ ಯಶ್ವಂತ್ ಪ್ರಭು ಉಪಸ್ಥಿತರಿದ್ದರು.

Similar News