ಮಾ.17ರಿಂದ ಪಡುಮಲೆ ದರ್ಗಾ ಆಂಡ್ ನೇರ್ಚೆ

Update: 2023-03-15 16:59 GMT

ಪುತ್ತೂರು: ಪಡುವನ್ನೂರು ಗ್ರಾಮದ ಪಡುಮಲೆಯಲ್ಲಿನ 800 ವರ್ಷಗಳ ಇತಿಹಾಸವಿರುವ ದರ್ಗಾ ಶರೀಫ್‍ನಲ್ಲಿ  ನಡೆಸಿಕೊಂಡು ಬರುತ್ತಿರುವ ಆಂಡ್ ನೇರ್ಚೆ, 3 ದಿನಗಳ ಧಾರ್ಮಿಕ ಉಪನ್ಯಾಸ ಹಾಗೂ ಕೂಟ್ ಪ್ರಾರ್ಥನೆ ಮಾ. 17ರಿಂದ 19ರ ತನಕ ನಡೆಯಲಿದೆ ಎಂದು ಪಡುಮಲೆ ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾ. 17ರಂದು ದ್ವಜಾರೋಹಣದೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಪುತ್ತೂರು ಕೇಂದ್ರ ಜುಮ್ಮಾ ಮಸೀದಿ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ದುವಾಶೀರ್ವಚನದೊಂದಿಗೆ ಉದ್ಘಾಟಿಸಲಿದ್ದಾರೆ. ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಪ್ರಭಾಷಣ ನೀಡಲಿದ್ದಾರೆ. ಮಾ.18ರಂದು ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಪ್ರಭಾಷಣ ನೀಡಲಿದ್ದಾರೆ.

ಮಾ. 19ರಂದು ಸಂಜೆ ಸೌಹಾರ್ಧ ಸಂಗಮ ನಡೆಯಲಿದೆ. ಮಾಜಿ ಉಸ್ತುವಾರಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ವಿಧಾನ ಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಮತ್ತಿತರ ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ. ರಾತ್ರಿ ಸಮಾರೋಪ ಸಮಾರಂಭ ನಡೆಯಲಿದ್ದು, ಸಯ್ಯದ್ ರಶೀದ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ದುವಾಶೀರ್ವಚನ ನೀಡಲಿದ್ದಾರೆ. ಇ.ಪಿ. ಅಬೂಬಕ್ಕರ್ ಅಲ್ ಖಾಸಿಮಿ ಪತ್ತನಾಪುರಂ ಪ್ರಭಾಷಣ ನೀಡಲಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ದಫ್, ಮೌಲೂದು ಪಾರಾಯಣ ಹಾಗೂ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಸೀದಿಯ ಖತೀಬ್ ಶಂಸುದ್ದೀನ್ ದಾರಿಮಿ, ಜಮಾಅತ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಅಲಿಹಾಜಿ ಪಿಲಿಕುಡೆ, ಸದಸ್ಯ ಆದಂ ಹಾಜಿ ಉಪಸ್ಥಿತರಿದ್ದರು. ಅ

Similar News