ಬೆಂ–ಮೈ ಎಕ್ಸ್‌ಪ್ರೆಸ್‌ವೇ | ಟೋಲ್ ಸಂಗ್ರಹ ವಿರೋಧಿಸಿ ಜೆಡಿಎಸ್ ಪ್ರತಿಭಟನೆ; ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ

Update: 2023-03-16 11:45 GMT

ರಾಮನಗರ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ ಟೋಲ್ ಸಂಗ್ರಹ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್‌ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. 

ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ್‌ ಕೂಡ ಪೊಲೀಸರ ವಶಕ್ಕೆ ಒಳಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ'ರಸ್ತೆ ಕಿತ್ತು ಬಂದಿಲ್ಲ' ಎಂದು ಟ್ವಿಟರ್ ನಲ್ಲಿ ಫೋಟೊ ಹಂಚಿಕೊಂಡ ಪ್ರತಾಪ್ ಸಿಂಹ: ಸಂಶಯ ವ್ಯಕ್ತಪಡಿಸಿದ ನೆಟ್ಟಿಗರು

Similar News