​ಪ್ರಧಾನಿ ಮೋದಿ ನೊಬೆಲ್ ಗೆ ಪರಿಗಣಿಸಲ್ಪಟ್ಟಿದ್ದಾರೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿ: ನೊಬೆಲ್ ಸಮಿತಿ ಉಪಾಧ್ಯಕ್ಷ

Update: 2023-03-16 14:29 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ನೊಬೆಲ್ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದಾರೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಿದ ನಾರ್ವೇಜಿಯನ್ ನೊಬೆಲ್ ಸಮಿತಿಯ ಉಪ ನಾಯಕ ಅಸ್ಲೆ ಟೋಜೆ ಅವರು ವದಂತಿಗಳಿಗೆ ತೆರೆ ಎಳೆದದಿದ್ದು, ಮೋದಿ ನೋಬೆಲ್ ಪ್ರಶಸ್ತಿಗೆ ಪ್ರಬಲ ಸ್ಪರ್ಧಿ ಅನ್ನುವುದನ್ನು ನಿರಾಕರಿಸಿದ್ದಾರೆ. ಈ ಕುರಿತು ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ. 

ಈ ಬಗ್ಗೆ ಎಎನ್ಐ ಜೊತೆ ಮಾತನಾಡಿದ ಅವರು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ, ನಾವು ಅದರ ಬಗ್ಗೆ ಹೆಚ್ಚು ಚರ್ಚಿಸಬಾರದು, ಅದಕ್ಕೆ ಹೆಚ್ಚಿನ ಒತ್ತು ನೀಡಬಾರದು ಎಂದು ಹೇಳಿದ್ದಾರೆ. 

ತಮ್ಮ ಭೇಟಿಯ ಉದ್ದೇಶದ ಕುರಿತು ಮಾತನಾಡಿದ ಅವರು, "ನಾನು ನಾರ್ವೇಜಿಯನ್ ನೊಬೆಲ್ ಸಮಿತಿಯ ಉಪ ನಾಯಕನಾಗಿ ಭಾರತಕ್ಕೆ ಬಂದಿಲ್ಲ, ನಾನು ಅಂತರರಾಷ್ಟ್ರೀಯ ಶಾಂತಿ ಮತ್ತು ತಿಳುವಳಿಕೆಯ ನಿರ್ದೇಶಕನಾಗಿ ಮತ್ತು ಭಾರತದ ಸ್ನೇಹಿತನಾಗಿ ಇಲ್ಲಿಗೆ ಬಂದಿದ್ದೇನೆ." ಎಂದರು.

Similar News