ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Update: 2023-03-16 15:12 GMT

ವಿಜಯಪುರ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಬಳಿ ಗುರುವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಇಂದು ನಗರದಲ್ಲಿ ಮಹಿಳಾ ಸಮಾವೇಶ ಸೇರಿದಂತೆ ಹಲವಾರು ಕಾರ್ಯಕ್ರಮಗಲ್ಲಿ ಭಾಗಿಯಾಗಿ ಸಂಜೆ ಹುಬ್ಬಳ್ಳಿಗೆ ತೆರಳುತ್ತಿದ್ದರು. ಈ ವೇಳೆ ನಗರ ಹೊರವಲಯದ ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50ರ ಜುಮನಾಳ ಬಳಿ ಸಚಿವರ ಕಾರಿಗೆ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಢಿಕ್ಕಿ  ಹೊಡೆದಿದೆ ಎನ್ನಲಾಗಿದೆ. 

ಅಪಘಾತದ ತೀವ್ರತೆ ಕಡಿಮೆ ಇದ್ದ ಪರಿಣಾಮ ಈ ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ  ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಕೇಂದ್ರ‌‌ ಸಚಿವೆ ಸಾದ್ವಿ ನಿರಂಜನಾ‌ ಜ್ಯೋತಿ ಹಾಗೂ ಕಾರ್ ಚಾಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ತಿಳಿದು ಬಂದಿದೆ. 

''ಈ ಅಪಘಾತದಲ್ಲಿ ಯಾರಿಗೂ ಗಂಭೀರ ಗಾಯವಾಗಿಲ್ಲ'' ಎಂದು ಪೊಲೀಸರ ಮಾಹಿತಿ ನೀಡಿದ್ದು, ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

Similar News