ಕೇಜ್ರಿವಾಲ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾದ ಬಿಜೆಪಿ

Update: 2023-03-17 03:52 GMT

ಹೊಸದಿಲ್ಲಿ: ಶುಕ್ರವಾರದಿಂದ ಆರಂಭವಾಗಿರುವ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಆಡಳಿತ ಹಾಗೂ ವಿರೋಧ ಪಕ್ಷದ ನಡುವಿನ ಬಿಸಿ ಚರ್ಚೆಗೆ ಕಾರಣವಾಗಲಿದೆ. ಲೆಫ್ಟಿನೆಂಟ್ ಜನರಲ್ ವಿ.ಕೆ.ಸಕ್ಸೇನಾ ಅವರನ್ನು ಆಡಳಿತಾರೂಢ ಆಮ್ ಆದ್ಮಿ ಪಕ್ಷ ಗುರಿ ಮಾಡಿದ್ದರೆ, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದೆ. ಏತನ್ಮಧ್ಯೆ ಅರವಿಂದ ಕೇಜ್ರಿವಾಲ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಲೆಫ್ಟಿನೆಂಟ್ ಜನರಲ್ ಅವರು ಅಧಿವೇಶನವನ್ನು ಉದ್ದೇಶಿಸಿ ಮಾಡುವ ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 21ರಂದು ಬಜೆಟ್ ಮಂಡನೆಯಾಗಲಿದೆ.

ಕೇಜ್ರಿವಾಲ್ ಸರ್ಕಾರದ ಇಬ್ಬರು ಸಚಿವರು ಜೈಲುಪಾಲಾಗಿದ್ದು, ಸರ್ಕಾರದ ವಿರುದ್ಧ ಮದ್ಯ ನೀತಿ, ತರಗತಿ ಕೊಠಡಿ ನಿರ್ಮಾಣ, ವಿದ್ಯುತ್ ಸಬ್ಸಿಡಿ ಸೇರಿದಂತೆ ಹಲವು ಹಗರಣದ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗುತ್ತದೆ ಎಂದು ಬಿಜೆಪಿ ಶಾಸಕರು ಜಂಟಿ ಹೇಳಿಕೆ ನೀಡಿದ್ದಾರೆ.

Similar News