×
Ad

ಮಾಂಸ ಮಾರಾಟಗಾರರನ್ನು ಥಳಿಸಿ, ದರೋಡೆಗೈದ ದಿಲ್ಲಿ ಪೊಲೀಸ್ ಸಿಬ್ಬಂದಿ

ಸಂತ್ರಸ್ತರ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ಕೊಲೆ ಬೆದರಿಕೆ

Update: 2023-03-17 10:48 IST

ಹೊಸದಿಲ್ಲಿ:  ಪೂರ್ವ ದಿಲ್ಲಿಯ ಶಾಹದಾರದಲ್ಲಿ ಇಬ್ಬರು ಮಾಂಸ ಮಾರಾಟಗಾರರನ್ನು ಮೂವರು ದಿಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಏಳು ಮಂದಿ ಥಳಿಸಿ ದರೋಡೆ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮಾರ್ಚ್ 7 ರಂದು ಆನಂದ್ ವಿಹಾರ್ ಪ್ರದೇಶದಲ್ಲಿ ಇಬ್ಬರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್‌ಗೆ ಢಿಕ್ಕಿ ಹೊಡೆದಾಗ ಘಟನೆ ನಡೆದಿದೆ.

‘ಗೋ ರಕ್ಷಕರು’ ಎನ್ನಲಾಗಿರುವ  ಆರೋಪಿಗಳು ಸಂತ್ರಸ್ತರ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಯ ಪ್ರಕಾರ, ಸಂತ್ರಸ್ತರು  ತಕ್ಷಣ ಪೊಲೀಸರನ್ನು ಸಂಪರ್ಕಿಸಿದ್ದರೂ ನಾಲ್ಕು ದಿನಗಳ ನಂತರ ಪ್ರಕರಣ ದಾಖಲಿಸಲಾಗಿದೆ.

ಘಟನೆಯಲ್ಲಿ ಭಾಗಿಯಾದ ಎಲ್ಲಾ ಏಳು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ, ಇದರಲ್ಲಿ ಮೂವರು ಪೊಲೀಸರು ಸೇರಿದ್ದಾರೆ. ಈ ಪೈಕಿ  ಒಬ್ಬ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅಮಾನತುಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News