ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

Update: 2023-03-17 06:41 GMT

ಬಂಟ್ವಾಳ,ಮಾ.17: ರೈಲು ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಮೃತಪಟ್ಟ ಯುವಕನನ್ನು ಮಾಣಿ ನಿವಾಸಿ ಅರ್ಜುನ್ (26) ಎಂದು ಗುರುತಿಸಲಾಗಿದೆ.

ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Similar News